ಬೆಂಗಳೂರು : ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ನಡೆದಿದೆ. ನಿನ್ನೆ ಸಂಜೆ ಬನ್ನೇರುಘಟ್ಟ ಸರ್ಕಲ್‌ನಲ್ಲಿ ಈ ದುರ್ಘಟನೆ ನಡೆದಿದೆ.
ಬೈರಪ್ಪನಹಳ್ಳಿ ನಿವಾಸಿ ವಿಶ್ವನಾಥ್ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿಶ್ವನಾಥ್ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾನೆ.
ಅಪಘಾತದ ವೇಳೆ ಲಾರಿ ಚಕ್ರ ಸವಾರನ ಮೇಲೆಯೇ ಲಾರಿ ಹರಿದ ಪರಿಣಾಮ ತೀವ್ರ ಗಾಯಗಳಾಗಿ ಸ್ಥಳದಲ್ಲೇ ವಿಶ್ವನಾಥ್ ಮೃತಪಟ್ಟಿದ್ದಾನೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!



















