ಬೆಂಗಳೂರು : ಬೆಂಗಳೂರು ನಗರದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, ಪರಿಣಾಮ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಬೆಳಗ್ಗೆ 7.30ರ ಸುಮಾರಿಗೆ ಕಾರ್ಪೊರೇಷನ್ ಸರ್ಕಲ್ ಬಳಿ ಈ ಘಟನೆ ನಡೆದಿದೆ.
ಸಿಗ್ನಲ್ ಕ್ರಾಸ್ ಮಾಡುತ್ತಿದ್ದ ಕಾರಿಗೆ ಮತ್ತೊಂದು ದಿಕ್ಕಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕನ ಬಾಗಿಲು ಸಂಪೂರ್ಣವಾಗಿ ಜಖಂ ಆಗಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಹಲಸೂರು ಟ್ರಾಫಿಕ್ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೊಳಗಾದ ಎರಡೂ ವಾಹನಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಲಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ ಲಾರಿ ಚಾಲಕ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದು ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ



















