ದಾವಣಗೆರೆ: ನಿಂತಿದ್ದ ಕಾರಿಗೆ ಲಾರಿ ಗುದ್ದಿದ ಪರಿಣಾಮ ವ್ಯಕ್ತಿಯು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರ್ ನಲ್ಲಿದ್ದ ಚಿತ್ರದುರ್ಗ ಮೂಲದ ಪ್ರದೀಪ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆ ಬಳಿ ಇರುವ ಹೆಬ್ಬಾಳು ಟೋಲ್ ನಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ಕಡೆ ತೆರಳುತ್ತಿದ್ದ ಕಾರು, ಟೋಲ್ ನಲ್ಲಿ ನಿಲ್ಲಿಸಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದು ಲಾರಿ ಗುದ್ದಿದೆ. ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಾರಿ ಚಾಲಕ ಲಾರಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಗಾಯಗೊಂಡ ಪ್ರದೀಪ್ ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.