ಕಾರವಾರ: ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ(Lorry overturned) ಪರಿಣಾಮ 10 ಜನರು ಬಲಿಯಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(Yallapur) ತಾಲೂಕಿನ ಗುಳ್ಳಾಪುರ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಈ ಘಟನೆ ನಡೆದಿದೆ. ಅಲ್ಲದೇ, ಘಟನೆಯಲ್ಲಿ 15ಕ್ಕೂ ಅಧಿಕ ಜನರು ಗಾಯಗೊಂಡಿದ್ದರೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ(hospital) ದಾಖಲಿಸಲಾಗಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದವರನ್ನು ಹಾವೇರಿ ಜಿಲ್ಲೆಯ ಸವಣೂರು ಮೂಲದವರು ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಮಂಜು ಮುಸುಕುಕಿದ್ದರಿಂದಾಗಿ ಲಾರಿ ಪಲ್ಟಿಯಾಗಿ ಈ ಘಟನೆ ನಡೆಯುವಂತಾಗಿದೆ. ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.