ಹೊಸೂರು: ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾದ ಪರಿಣಾಮ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.
ತಮಿಳುನಾಡಿನ ಹೊಸೂರು ಸಮೀಪದ ಕುಮುಡೆಪಳ್ಳಿ ಬಳಿ ಈ ಘಟನೆ ನಡೆದಿದೆ. ತೆಂಗಿನಕಾಯಿ ಲೋಡ್ ಹೊತ್ತು ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಲಾರಿ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ವಾಹನದಲ್ಲಿ ಇದ್ದ ಚಾಲಕ ಮತ್ತು ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ಪಲ್ಟಿಯಾದ ಪರಿಣಾಮ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಕೆಲವೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿ ಟ್ರಾಫಿಕ್ ಜಾಮ್ ಕಂಡುಬಂದಿತು.
ಈ ಘಟನೆ ಆಡ್ಕೋ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನ ಸಂಚಾರವನ್ನು ಸಾಮಾನ್ಯ ಸ್ಥಿತಿಗೆ ತಂದಿದ್ದಾರೆ.
ಇದನ್ನೂ ಓದಿ : ಟಿಟಿ ವಾಹನಕ್ಕೆ ಲಾರಿ ಡಿಕ್ಕಿ : ಕಾಶಿಗೆ ಹೊರಟಿದ್ದ ಮೂವರು ಮಹಿಳೆಯರು ದಾರುಣ ಸಾವು



















