ಬೆಳಗಾವಿ: ವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಕಾರು ಸಮೇತ ಘಟಪ್ರಭಾ ನದಿಗೆ ಬಿದ್ದಿರುವ ಘಟನೆ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ನಿವಾಸಿ ಕಿರಣ ಲಕ್ಷ್ಮಣ ನಾವಲಗಿ(45) ನದಿಗೆ ಬಿದ್ದಿರುವ ವ್ಯಕ್ತಿ ಎನ್ನಲಾಗಿದೆ.
ಈ ವ್ಯಕ್ತಿ ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಆದರೆ, ಡಿ. 30ರಂದು ಏಕಾಏಕಿ ಮನೆಯಿಂದ ಹೊರಗೆ ಬಂದಿದ್ದರು ಎನ್ನಲಾಗಿದೆ. ಉದ್ಯಮದಲ್ಲಿ ನಷ್ಟ ಉಂಟಾಗಿದ್ದಕ್ಕೆ ಈ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.