ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಅಖಾಡಕ್ಕೆ ಬಿ.ವೈ.ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ದಾವಣಗೆರೆ ಹೊರವಲಯ ಖಾಸಗಿ ರೆಸಾರ್ಟ್‌ನಲ್ಲಿ ಲಿಂಗಾಯತ ಮುಖಂಡರ ಜೊತೆ ಸಭೆ ನೆಡೆಸಿದ್ದಾರೆ.
ಈ ಸಭೆಯಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ಜೆಡಿಎಸ್ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಬಿ.ಜಿ.ಅಜಯಕುಮಾರ್, ಲೋಕಿಕೆರೆ ನಾಗರಾಜ್ ಸೇರಿ ಹಲವರು ಉಪಸ್ಥಿತರಿದ್ದರು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಕಸರತ್ತು ನಡೆಸುತ್ತಿರುವ ಬಿವೈವಿ ಇಂದು ದಾವಣಗೆರೆಯಲ್ಲಿ ಸರಣಿ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಜೊತೆ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಸಿದ್ದು, ಇಂದು ಮಧ್ಯಾಹ್ನ ನೇಕಾರ, ಉಪ್ಪಾರ ಸೇರಿ ಅಹಿಂದ ಸಮುದಾಯದ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ : ಶಿಕ್ಷಣ ಸಚಿವರು ಮಕ್ಕಳ ಭವಿಷ್ಯಕ್ಕಾಗಿ ಐತಿಹಾಸಿಕ ತೀರ್ಮಾನ ಮಾಡಿದ್ದಾರೆ : ಕರವೇ ನಾರಾಯಣ ಗೌಡ


















