ಹುಬ್ಬಳ್ಳಿ: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸದರಸೋಪಾ ಓಣಿಯಲ್ಲಿ ನಡೆದಿದೆ. ಗೌಸು ಮೊಯಿನುದ್ದೀನ್ ಚಾಕು ಇರಿತಕ್ಕೊಳಗಾದ ಯುವಕ. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿರುವ ಯುವಕ.
ಯುವತಿಯೇ ಪೋನ್ ಮಾಡಿ ಗೌಸ್ ಮೊಯಿನುದ್ದೀನ್ ನನ್ನು ಕರೆಸಿದ್ದಳು. ಯುವತಿಯ ಮಾತು ನಂಬಿ ಬಂದಿದ್ದ ಯುವಕನ ಮೇಲೆ, ಯವತಿಯ ಚಿಕ್ಕಪ್ಪ ವಸೀಂ, ನಮ್ಮ ಮನೆಯ ಹುಡುಗಿಯನ್ನು ಪ್ರೀತಿಸಿದ್ದಾನೆಂದು ಕುಪಿತಗೊಂಡು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ.
ಗಾಯಾಳು ಗೌಸ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಹಿನ್ನೆಲೆ ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದ ಗಾಯಾಳು ಗೌಸ್ ನಿಂದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
ಚಾಕುವಿನಿಂದ ಇರಿದ ವಸೀಂ ಮತ್ತು ಯುವತಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಯಾವ ಕಾರಣಕ್ಕಾಗಿ ಚಾಕು ಇರಿತವಾಗಿದೆ ಹಾಗೂ ಇತ್ಯಾದಿ ಮಾಹಿತಿಗಳನ್ನು ಸಂಗ್ರಹ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















