ಚಿಕ್ಕಮಗಳೂರು: ಅಪ್ರಾಪ್ತ ಬಾಲಕನಿಂದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಲ್ಲಿ ಅಪ್ರಾಪ್ತರನ್ನು ಬಳಸಿಕೊಂಡು ಕೋಮು ಸಂಘರ್ಷ ಸೃಷ್ಟಿಸಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ವಿಶ್ವ ಹಿಂದೂ ಪರಿಷತ್ ಬಜರಂಗದಳದಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಆಗ್ರಹಿಸಿ ಮೂಡಿಗೆರೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಲವ್ ಜಿಹಾದ್, ಅಕ್ರಮ ಗೋ ಕಳ್ಳತನ ಹಾಗೂ ಸಾಗಾಟ, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಮೂಡಿಗೆರೆ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯ ಹಿನ್ನೆಲೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.
ಇದನ್ನೂ ಓದಿ : ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ



















