ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಪ್ರೇಮಿಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆಯೊಂದು ನಡೆದಿದೆ.
ಮೃತರನ್ನು ಜಗದೀಶ ಕವಳೇಕರ ಹಾಗೂ ಗಂಗಮ್ಮಾ ಎಂದು ಗುರುತಿಸಲಾಗಿದೆ. ನದಿ ದಡದಲ್ಲಿ ಶವಗಳು ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ರಾಮದುರ್ಗ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಮೈಸೂರು | ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನಕ್ಕೆ ಯತ್ನ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ



















