ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಆರಂಭದಲ್ಲಿ ಜಾರ್ಖಂಡ್ ನಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿತ್ತು. ಆದರೆ, ಈಗ ಇಂಡಿಯಾ ಒಕ್ಕೂಟ ಮುನ್ನಡೆ ಪಡೆದುಕೊಂಡಿದ್ದು, ಬಿಜೆಪಿಗೆ ಶಾಕ್ ಎದುರಾಗಿದೆ.
ಇನ್ನೊಂದೆಡೆ ಮಹಾರಾಷ್ಟ್ರ ಎನ್ ಡಿಎ ಭರ್ಜರಿ ಗೆಲುವಿನತ್ತ ಮುಖ ಮಾಡಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿತ್ತು. ಜಾರ್ಖಂಡ್‌ನ 81 ಸ್ಥಾನಗಳ ಪೈಕಿ ಇಂಡಿಯಾ ಒಕ್ಕೂಟ 52 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದು ಎನ್‌ಡಿಎ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸರಳ ಬಹುಮತಕ್ಕೆ 41 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದ್ದು, ಕಾಂಗ್ರೆಸ್, ಜೆಎಂಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ. ಜಾರ್ಖಂಡ್ ನಲ್ಲಿ ಎರಡು ಹಂತದಲ್ಲಿ ಮತದಾನ ನಡೆದಿತ್ತು. ಜಾರ್ಖಂಡ್ ನಲ್ಲಿ ಎನ್ ಡಿಎ ಹಿನ್ನಡೆ ಅನುಭವಿಸಿದರೆ, ಮಹಾರಾಷ್ಟ್ರದಲ್ಲಿ ಮಾತ್ರ ಎನ್ ಡಿಎ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. 288 ಸ್ಥಾನಗಳ ಪೈಕಿ ಎನ್ ಡಿಎ 220 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.