ಬೆಂಗಳೂರು: ನಗರದ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಲ್ಯಾಂಬೊರ್ಗಿನಿ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಿಫ್ಟಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಘಟನೆಯ ಕುರಿತು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಎರಡು-ಮೂರು ಬಾರಿ ಕಾರು ಡ್ರಿಫ್ಟಿಂಗ್ ಮಾಡಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಇದಲ್ಲದೆ, ಕಾರಿನ ನೋಂದಣಿ ಮತ್ತು ದಾಖಲೆಗಳು ಯಾರ ಹೆಸರಿನಲ್ಲಿ ಇವೆ ಎಂಬುದನ್ನು ಪರಿಶೀಲಿಸಲು ಆರ್‌ಟಿಒಗೆ ಪೊಲೀಸರು ಪತ್ರ ಬರೆದಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ ಇಬ್ಬರು ಅರೆಸ್ಟ್


















