ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕಳಪೆ ಆರಂಭ ಪಡೆದಿದ್ದು, ವಿರಾಟ್ ಕೊಹ್ಲಿ (Virat Kohli) ವಿಶೇಷ ದಾಖಲೆ ಬರೆದಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. ಇನಿಂಗ್ಸ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆದಿರಲಿಲ್. ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೇವಲ 2 ರನ್ಗಳಿಸಿ ಔಟಾದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಮಾಡಿದರು.
ಭಾರತದ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2004 ರಿಂದ 2019 ರ ವರೆಗೆ ಭಾರತ ತಂಡದ ಪರ ಧೋನಿ ಒಟ್ಟು 535 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ 2ನೇ ಆಟಗಾರ ಎನಿಸಿಕೊಂಡಿದ್ದರು. ಈಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕಿಂಗ್ ಕೊಹ್ಲಿ ಒಟ್ಟು 536 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 1989 ರಿಂದ 2013 ರವರೆಗೆ ಭಾರತ ತಂಡ ಪ್ರತಿನಿಧಿಸಿದ್ದ ಸಚಿನ್ ಒಟ್ಟು 664 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಅವರ ಹೆಸರಿನಲ್ಲಿದೆ.