ಚಾಮರಾಜನಗರ: ಪಾದಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ್ದು, ವೃದ್ಧರು ಸೇರಿದಂತೆ 7 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರದೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.
ಯಳಂದೂರು ಪಟ್ಟಣದ ಚೌಡಮ್ಮ, ವೈ.ಕೆ.ಮೋಳೆ ಗ್ರಾಮದ ಲಕ್ಷ್ಮಮ್ಮ, ಕೆ.ದೇವರಹಳ್ಳಿ ಗ್ರಾಮದ ರತ್ನಮ್ಮ ಸೇರಿದಂತೆ 7 ಮಂದಿಯ ಕೈ-ಕಾಲುಗಳಿಗೆ ನಾಯಿ ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ ಪಾದಾಚಾರಿಗಳ ಮೇಲೆ ಎಗರಿಬಿದ್ದಿದೆ. ಅಲ್ಲದೇ, ಕಂಡಕಂಡವರ ಮೇಲೆ ದಾಳಿ ಮಾಡಿ ಪರಾರಿಯಾಗಿದೆ. ಗಾಯಗೊಂಡವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಗಾಯಗೊಂಡವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ ಎಂದು ತಿಳಿದು ಬಂದಿದ್ದು, ಈ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಇದನ್ನೂ ಓದಿ: ದಾವಣಗೆರೆ | ಮಹಿಳೆಯನ್ನು ಕಚ್ಚಿ ಕೊಂದಿದ್ದ ರಾಟ್ ವೀಲರ್ ನಾಯಿ ಮಾಲೀಕನ ಬಂಧನ



















