ಮದ್ದೂರು: ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ವಿದ್ಯುತ್ ಕಡಿತಗೊಳಿಸಿ ಅನ್ಯಕೋಮಿನ ಗುಂಪಂದು ಕ ಲ್ಲು ತೂರಾಟ ಮಾಡಿದ್ದು, ಪ್ರತಿಯಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರ ಗುಂಪು ಕೂ ಕಲ್ಲಿನಿಂದ ತೂರಾಟ ನ ಡೆಸಿರುವ ಘಟನೆ ಪಟ್ಟಣದ ಮಸ್ಟೀದ್ ಹುಸೇನ್ ಘನಿ ಮಸೀದಿಯ ಸುನ್ನಿ ಚೌಕದ ಬಳಿ ನಿನ್ನೆ(ಭಾನುವಾರ (ಸೆ.7) ಸಂಜೆ ನಡೆದಿದೆ.
ಕಲ್ಲು ತೂರಿದ ಅನ್ಯ ಕೋಮಿನವರ ವಿರುದ್ದ ಹಿಂದೂ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮದ್ದೂರು ಪಟ್ಟಣದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ. ಪ್ರತಿಭಟನೆ ಮಾಡುವ ಮೂಲಕ ಹಿಂದೂ ಸಂಸ್ಕೃತಿಯ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟ ಮಾಡಿರುವವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪಟ್ಟಣದ ಉಗ್ರ ನರಸಿಂಹ ದೇವಸ್ಥಾನದಿಂದ ಹಿಂದೂಪರ ಸಂಘಟನೆಯ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಹಿಂದು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಹೆಜ್ಜೆ ಹಾಕಿದ್ದಾರೆ. ಮಾತ್ರವಲ್ಲದೇ, ಮದ್ದೂರಿನ ಹೂವಿನ ಸರ್ಕಲ್ ಬಳಿ ಇಸ್ಲಾಂ ಧರ್ಮದ ಹಸಿರು ಭಾವುಟ ಕಿತ್ತು, ಹಿಂದೂಗಳ ಕೇಸರಿ ಭಾವುಟವನ್ನು ಹಾರಿಸಿ ಆಕ್ರೋಶ ಹೊರ ಹಾಕಿದ್ದಲ್ಲದೇ, ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
“ಡಿಜಿಪಿ ಸಲೀಂಗೆ ಸಿಎಂ ಕರೆ”
ಮದ್ದೂರಿನಲ್ಲಿ ನಡೆದಿರುವ ಘಲಬೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಡಿಜಿಪಿ ಸಲೀಂ ಅಹಮದ್‌ಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಪರಿಸ್ಥಿತಿ ಬಿಗಡಾಯಿಸದಂತೆ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಿದ್ದಾರೆ.
ಕಲ್ಲು ತೂರಾಟ ನಡೆಸಿದವರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ತಪ್ಪಿತಸ್ಥರು ಯಾರೆ ಇರಲಿ ಕೂಡಲೇ ಬಂಧಿಸಿ ಎಂದು ಸಿಎಂ ಖಡಕ್ ಸೂಚನೆ ನೀಡಿದ್ದಾರೆ.
ಮಾತ್ರವಲ್ಲದೇ, ಮಂಡ್ಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಅವರಿಂದಲೂ ಮಾಹಿತಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.