ಉಡುಪಿ : ದೈತಮಠದ ಸ್ಥಾಪಕ, ದ್ವಾರಕೆಯಿಂದ ಬಂದ ಕೃಷ್ಣನ ಮೂರ್ತಿಯನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಿ, ಪೂಜೆಗಾಗಿ ಅಷ್ಟಮಠಗಳನ್ನು ಸ್ಥಾಪಿಸದರೆನ್ನಲಾದ ಶ್ರೀಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ ಸಮಾರಂಭ ಆ.30ರಂದು ಸಂಜೆ 4ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಕೇಂದ್ರ ಸರಕಾರದ ಸಂವಹನ ಮತ್ತು ಭಾರತೀಯ ಅಂಚೆ ಇಲಾಖೆಯ ಆಯೋಜಿಸುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.