ಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯಲ್ಲಿ ತುಂಗಾನದಿ ಉಕ್ಕಿ ಉರಿಹರಿಯುತ್ತಿದೆ.
ಉಕ್ಕಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕರು ಹುಚ್ಚಾಟ ಮೆರೆಯುತ್ತಿದ್ದು, ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಫೋಟೋ ರೀಲ್ಸ್ ಶೋಕಿಗಾಗಿ ಭೋರ್ಗರೆಯುವ ನದಿ ಪಕ್ಕ ಯುವಕರು ಹುಚ್ಚಾಟ ಮೆರೆಯುತ್ತಿದ್ದಾರೆ. ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.