ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ. ಅಲ್ಲದೇ, ಉತ್ತರ ಪ್ರದೇಶ ಸೇರಿದಂತೆ 15 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ.
ಮಹಾರಾಷ್ಟ್ರದ ಎಲ್ಲ 288 ಸ್ಥಾನಗಳಿಗೆ ಹಾಗೂ ಜಾರ್ಖಂಡ್ ನ ಎರಡನೇ ಹಂತ ಹಾಗೂ ಅಂತಿಮ ಹಂತದಲ್ಲಿ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶ, ಉತ್ತರಾಖಂಡ್ (ಒಂದು ಸ್ಥಾನ), ಪಂಜಾಬ್ (ನಾಲ್ಕು ಸ್ಥಾನಗಳು) ಮತ್ತು ಕೇರಳ (ಒಂದು ಸ್ಥಾನ)ಗಳಲ್ಲಿ ಉಪಚುನಾವಣೆ ನಡೆಯುತ್ತಿದೆ.
ಅಲ್ಲದೇ, ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಮಧ್ಯೆ ನೇರ ಸ್ಪರ್ಧೆ ಇದೆ.
ಜಾರ್ಖಂಡ್ ಚುನಾವಣೆಯ ಎರಡನೇ ಹಂತದಲ್ಲಿ 38 ಸ್ಥಾನಗಳಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಭಾರತ ಮೈತ್ರಿಕೂಟ ಮತ್ತು ಎನ್ ಡಿಎ ಮಧ್ಯೆ ಫೈಟ್ ಇದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.
ಜಾರ್ಖಂಡ್‌ನ ಒಟ್ಟು 81 ವಿಧಾನಸಭಾ ಸ್ಥಾನಗಳ ಪೈಕಿ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ 149 ಸ್ಥಾನಗಳಲ್ಲಿ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಸ್ಥಾನಗಳಲ್ಲಿ ಕಣಕ್ಕೆ ಇಳಿದಿದೆ. ಕಾಂಗ್ರೆಸ್ 101, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಎರಡೂ ಶಿವಸೇನೆ ಪಕ್ಷಗಳು 50ಕ್ಕೂ ಅಧಿಕ ಸ್ಥಾನಗಳಲ್ಲಿ ಪರಸ್ಪರ ಎದುರಾಳಿಯಾಗಿವೆ. ಇನ್ನೂ ಪವಾರ್ ನೇತೃತ್ವದ ಎರಡೂ ಪಕ್ಷಗಳು 37 ಕ್ಷೇತ್ರಗಳಲ್ಲಿ ಪರಸ್ಪರ ಎದುರಾಳಿಗಳಾಗಿವೆ.