ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಆರೋಪ -ಪ್ರತ್ಯಾರೋಪಗಳು ಜೋರಾಗಿವೆ. ಈ ಮಧ್ಯೆ ಯಾರು ಗೆಲ್ಲುತ್ತಾರೆ ಎಂಬ ಚರ್ಚೆ ಶುರುವಾಗಿದ್ದು, ಲೋಕ ಪೋಲ್ ಚುನಾವಣೆ ಪೂರ್ವ ಸಮೀಕ್ಷೆ ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 20ಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಬಾರಿ ಮಹಾವಿಕಾಸ್ ಅಘಾಡಿ ಹಾಗೂ ಮಹಾಯುತಿ ಮಧ್ಯೆ ದೊಡ್ಡ ಫೈಟ್ ನಡೆದಿದೆ. ಶಿವಸೇನಾ ಹಾಗೂ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಗಳು ಇಬ್ಭಾಗವಾದ ಮೇಲೆ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದೆ. ಅಲ್ಲದೇ, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ತೀವ್ರ ಪೈಪೋಟಿ ಇದೆ.
10ಕ್ಕೂ ಹೆಚ್ಚು ಸಣ್ಣ ಪಕ್ಷಗಳು ಮಹಾರಾಷ್ಟ್ರ ಚುನಾವಣೆಯ ಕಣದಲ್ಲಿ ಇವೆ. ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಇದೆ. ಚುನಾವಣೆ ಪೂರ್ವ ಸಮೀಕ್ಷೆಯನ್ನು ಲೋಕಪೊಲ್ ಬಿಡುಗಡೆ ಮಾಡಿದೆ. ಲೋಕಪೋಲ್ ನ ಸಮೀಕ್ಷೆ ವರದಿಯಂತೆ, ಈ ಬಾರಿ ರಾಜ್ಯದಲ್ಲಿ ಮಹಾಯುತಿ (ಬಿಜೆಪಿ ಮೈತ್ರಿಕೂಟ)ಗೆ 115ರಿಂದ 128 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎನ್ನಲಾಗುತ್ತಿದೆ. ಮಹಾ ವಿಕಾಸ್ ಅಘಾಡಿ (ಕಾಂಗ್ರೆಸ್ ನೇತೃತ್ವ)ಕ್ಕೆ 151ರಿಂದ 162 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎನ್ನಲಾಗುತ್ತಿದೆ. ಉಳಿದಂತೆ ಇನ್ನಿತರರು 5ರಿಂದ 14 ಸ್ಥಾನಗಳು ಸಿಗಲಿವೆ ಎಂದು ಸಮೀಕ್ಷಾ ವರದಿ ಹೇಳಿದೆ. ಈ ಸಮೀಕ್ಷೆಯಂತೆ ಬಿಜೆಪಿ ಮೈತ್ರಿಗೆ ಸೋಲಾಗಬಹುದು ಎನ್ನಲಾಗುತ್ತಿದೆ. ಆದರೆ, ಮತದಾರನ ಚಿತ್ತ ಏನಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.