ಮುಂಬೈ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಆ ವಾರ್ಡ್‌ನಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.
ಪಂಗಾರ್ಕರ್ 2001 ಮತ್ತು 2006ರ ನಡುವೆ ಅವಿಭಜಿತ ಶಿವಸೇನೆಯಿಂದ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು. 2011ರಲ್ಲಿ ಶಿವಸೇನೆ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಅವರು ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಯನ್ನು ಸೇರಿದ್ದರು.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 4, 2024 ರಂದು ಅವರಿಗೆ ಜಾಮೀನು ನೀಡಿತ್ತು. ನವೆಂಬರ್ 2024 ರ ವಿಧಾನಸಭಾ ಚುನಾವಣೆಗೆ ಮುನ್ನ, ಪಂಗಾರ್ಕರ್ ಶಿವಸೇನೆಗೆ ಸೇರ್ಪಡೆಗೊಂಡಿದ್ದರು. ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ ವ್ಯಕ್ತವಾದ ನಂತರ ಶಿಂಧೆ ಅವರು ಪಂಗಾರ್ಕರ್ ಅವರ ಸೇರ್ಪಡೆ ಪ್ರಕ್ರಿಯೆಯನ್ನು ಅಮಾನತಿನಲ್ಲಿಟ್ಟಿದ್ದರು.
ಇದನ್ನೂ ಓದಿ : ಉಡುಪಿ | ಜನ-ಜಾನುವಾರುಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು


















