ಬೆಂಗಳೂರು : ದೇಶದ ಪ್ರಮುಖ ಖಾಸಗಿ ಸಂಶೋಧನಾ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE Recruitment 2026)ನಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 4 ಪ್ರಾಜೆಕ್ಟ್ ರಿಸರ್ಚ್ ಸಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)
ಹುದ್ದೆಯ ಹೆಸರು: ಪ್ರಾಜೆಕ್ಟ್ ರಿಸರ್ಚ್ ಸಂಟಿಸ್ಟ್
ಒಟ್ಟು ಹುದ್ದೆಗಳು: 4
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 12
ಉದ್ಯೋಗ ಸ್ಥಳ: ಉಡುಪಿ
2 ಪ್ರಾಜೆಕ್ಟ್ ರಿಸರ್ಚ್ ಸಂಟಿಸ್ಟ್ ಹಾಗೂ 2 ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್-2 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 56 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ manipal.eduಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Director – HR Manipal Academy of Higher Education Madhav Nagar, Manipal 576104 Udupi, Karnataka
ಇದನ್ನೂ ಓದಿ : ಬಿಸಿಸಿಐನಲ್ಲಿ ಹೊಸ ಜವಾಬ್ದಾರಿಗೆ ಪ್ರವೀಣ್ ಕುಮಾರ್ ಅರ್ಜಿ; ಕಿರಿಯರ ಆಯ್ಕೆ ಸಮಿತಿಯಲ್ಲಿ ಸ್ಥಾನಕ್ಕೆ ಕಣ್ಣಿಟ್ಟ ಮಾಜಿ ವೇಗಿ!



















