ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಲಾಗಿದೆ.
ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 20ರಂದೇ ಗಡಿಪಾರು ಮಾಡಿ ಆದೇಶ ಹೊರಡಿಸಿರುವ ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್. ತಿಮರೋಡಿಯವರ ವಿರುದ್ಧ ಒಟ್ಟು 32 ಪ್ರಕರಣಗಳು ದಾಖಲಾಗಿದ್ದವು.
ಧರ್ಮಸ್ಥಳದ ಸೌಜನ್ಯಾ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೋರಾಟವನ್ನು ನಡೆಸಿದ್ದರು.ಬುರುಡೆ ಪ್ರಕರಣ, ಶವ ಹೂತಿಟ್ಟ ಕೇಸ್‌ನಲ್ಲಿ ಆರೋಪಿ ಚಿನ್ನಯ್ಯನಿಗೆ ತಮ್ಮ ಮನೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರು ಆಶ್ರಯ ನೀಡಿದ್ದರು