ಬೆಂಗಳೂರು : ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು, ಇದೀಗ ಗಡಿಪಾರು ಆದೇಶ ರದ್ದುಪಡಿಸಿದೆ.
ಇದೇ ವೇಳೆ, ಅಲ್ಲದೇ ಸೂಕ್ತ ಕಾರಣ, ಸೆಕ್ಷನ್ಗಳೊಂದಿಗೆ ಹೊಸದಾಗಿ ಪ್ರಕರಣದ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಏನಿದು ಪ್ರಕರಣ?
ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಇದನ್ನೂ ಓದಿ : ಉಡುಪಿ | ಪ್ರಧಾನಿ ಮೋದಿ ರೋಡ್ ಶೋ ಸಾಧ್ಯತೆ, ಜಿಲ್ಲೆಯಲ್ಲಿ ಸಕಲ ಸಿದ್ಧತೆ!



















