ಮಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ವೇಳೆ ನ್ಯಾ. ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು ಈ ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಸೂಚನೆ ನೀಡಿದೆ.
ಈ ಹಿಂದೆ ಧರ್ಮಸ್ಥಳದ ಸಂಸ್ಥೆಗಳಿಗೆ ವಕೀಲರಾಗಿದ್ದ ಹಿನ್ನೆಲೆ ನ್ಯಾ. ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು, ಗಡೀಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದೆ.
ಪುತ್ತೂರು ಉಪ ವಿಭಾಗಾಧಿಕಾರಿಗಳು 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಸೋಮವಾರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು. ಆದರೆ ಇದೀಗಾ, ಈ ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ನ್ಯಾ. ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು ತಿಳಿಸಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ | ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್ ಆದೇಶ!



















