ಕೋಲಾರ: ಕೋಲಾರದ ಪೈಂಟ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಕೋಲಾರ ಜಿಲ್ಲೆಯ ಮಾಲೂರಿನ ಕೂರಂಡಹಳ್ಳಿ ಕೈಗಾರಿಕಾ ಪ್ರದೇಶದ 3 ನೇ ಹಂತದ ಸೌತ್ ಫೀಲ್ಡ್ ಪೈಂಟ್ಸ್ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಆಕಸ್ಮಿಕ ಅಗ್ನಿ ಅವಘಡದಿಂದ ಉತ್ಪಾದಕ ಘಟಕದಲ್ಲಿನ ರಾಸಾಯನಿಕ ಟ್ಯಾಂಕ್ ಗಳು ಸ್ಪೋಟಗೊಂಡಿದೆ. ಸದ್ಯ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.