ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಳೆದ ತಿಂಗಳು ಅಂದರೆ ಮಾರ್ಚ್‌ನಲ್ಲಿ ನೈಸ್ ರಸ್ತೆಯ ಸೋಂಪುರ ಸರ್ಕಲ್‌ನಲ್ಲಿ ಹೊಸದಾಗಿ ಆರಂಭವಾಗಿದ್ದ ‘ಶುದ್ಧ ತಿಂಡಿ’ ಹೋಟೆಲ್‌ನಲ್ಲಿ ಇದ್ದಕ್ಕಿದ್ದಂತೆ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿದೆ.
ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇಡೀ ಹೋಟೆಲ್‌ಗೆ ಬೆಂಕಿ ಆವರಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿಗಳು ಹಾಗೂ ಗ್ರಾಹಕರು ಕೂಡಲೇ ಹೊರಗೆ ಓಡಿ ಬಂದಿದ್ದು, ಸೇಫ್ ಆಗಿದ್ದಾರೆ.
ಇದನ್ನೂ ಓದಿ ; ಚಲಿಸುತ್ತಿದ್ದ KSRTC ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ.. ತಪ್ಪಿದ ಭಾರಿ ಅನಾಹುತ!


















