ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.
ಆರೋಪಿ ಪ್ರದೋಷ್ ‘ನನ್ನನ್ನು ಕ್ಷಮಿಸಿ.. ಸತ್ಯವನ್ನೇ ಹೇಳುತ್ತೇನೆ.. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಎಂದು ತಮ್ಮ ವಕೀಲರ ಮೂಲಕ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶರ ಮುಂದೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ವಿಚಾರಣೆ ವೇಳೆ ದರ್ಶನ್ ಇರುವ ಕೊಠಡಿ ಬಿಟ್ಟು ತಮ್ಮನ್ನು ಪ್ರತ್ಯೇಕ ಜೈಲು ಕೊಠಡಿಯಿಂದ ಹಾಜರುಪಡಿಸಬೇಕು ಎಂದು ಪ್ರದೋಷ್ ಮನವಿ ಮಾಡಿದ್ದಾರೆ. ದರ್ಶನ್ ಬೆದರಿಕೆ ಹಾಕುವುದು ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಈ ಭದ್ರತಾ ಮನವಿ ಸಲ್ಲಿಸಲಾಗಿದೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ (A1) ಆಗಿದ್ದರೆ, ನಟ ದರ್ಶನ್ ಎರಡನೇ ಆರೋಪಿ (A2) ಆಗಿದ್ದಾರೆ. ಈಗ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ನಟ ದರ್ಶನ್‌ಗೆ ದೊಡ್ಡ ಮುಳ್ಳಾಗುವ ಸಾಧ್ಯತೆಯಿದೆ. ಪ್ರದೋಷ್ ನೀಡುವ ಹೇಳಿಕೆಗಳು ಈ ಪ್ರಕರಣದ ತನಿಖೆಯಲ್ಲಿ ಅತ್ಯಂತ ನಿರ್ಣಾಯಕವಾಗಲಿವೆ.
ಇದನ್ನೂ ಓದಿ : ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್



















