ದಳಪತಿ ವಿಜಯ್ ಮುಂದಿನ ಚಿತ್ರದಲ್ಲಿ ಮಲಯಾಳಂ ನಟಿ ಮಮಿತಾ ಬೈಜು ನಾಯಕಿಯಾಗಿ ಹೆಜ್ಜೆ ಹಾಕಬಹುದು ಎಂದು ಚಿತ್ರರಂಗ ಮಾತನಾಡಿಕೊಳ್ಳುತ್ತಿದೆ.
ಈ ಚಿತ್ರಕ್ಕೆ ಈಗಾಗಲೇ ತಾತ್ಕಾಲಿಕವಾಗಿ ‘ದಳಪತಿ 69’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಮಮಿತಾ ಕೂಡ ನಟಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಷಯ ಮಾತ್ರ ಅಧಿಕೃತವಾಗಿ ತಿಳಿದು ಬಂದಿಲ್ಲ. ‘ಪ್ರೇಮಲು’ ಆದ ಬಳಿಕ ಮಮಿತಾ ಅವರ ಖ್ಯಾತಿ ಹೆಚ್ಚಾಗಿದೆ.
ದಳಪತಿ ವಿಜಯ್ ಸದ್ಯದಲ್ಲಿಯೇ ರಾಜಕೀಯ ಅಖಾಡಕ್ಕೆ ಧುಮುಕಲು ಸಿದ್ಧತೆ ನಡೆಸಿದ್ದಾರೆ. ಅಲ್ಲದೇ, ತಮ್ಮದೆ ಪಕ್ಷವನ್ನು ಕೂಡ ಅವರು ಘೋಷಣೆ ಮಾಡಿದ್ದಾರೆ. ಸದ್ಯ ‘GOAT’ ಚಿತ್ರದಲ್ಲಿ ನಟಿಸುತ್ತಿರುವ ಅವರು, ವೃತ್ತಿ ಜೀವನದ ಕೊನೆಯ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರದಲ್ಲಿ ಮಮಿತಾ ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
‘ದಳಪತಿ 69’ ಚಿತ್ರವನ್ನು ಎಚ್. ವಿನೋದ್ ನಿರ್ದೇಶಿಸುತ್ತಿದ್ದಾರೆ. ವರದಿಗಳ ಪ್ರಕಾರ ಮಮಿತಾ ಅವರು ನಾಯಕಿ ಅಲ್ಲ, ಬದಲಿಗೆ ವಿಜಯ್ ಸಹೋದರಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
ಈಗ ವಿಜಯ್ ‘ಗೋಟ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೀನಾಕ್ಷಿ ಚೌಧರಿ, ಮಾಳವಿಕಾ ಶರ್ಮಾ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 5 ರಂದು ಈ ಚಿತ್ರ ಥಿಯೇಟರ್ ಗೆ ಅಪ್ಪಳಿಸಲಿದೆ. ವೆಂಕಟ ಪ್ರಭು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.