ಮೈಸೂರು : ಗಂಡು ಹುಲಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಹುಲಿಯೂ ಉಪಟಳ ನೀಡುತ್ತಿದ್ದು, ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಇದೀಗ ಹುಲಿಯನ್ನು ಸೆರೆ ಹಿಡಿದಿದ್ದು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸುರಕ್ಷಿತವಾಗಿ ಇರಿಸಿದ್ದಾರೆ.
ಈ ಹಿಂದೆ ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ನಾಲ್ಕು ಹುಲಿ ಮರಿಗಳು ಸೆರೆ ಸಿಕ್ಕಿತ್ತು. ಅದರಲ್ಲಿ ನಾಲ್ಕು ಹುಲಿ ಮರಿಗಳು ಮೃತಪಟ್ಟಿತ್ತು. ತಾಯಿ ಹುಲಿಯನ್ನು ಸೆರೆ ಹಿಡಿದ ಬಳಿಕ ಮರಿಗಳು ಆಹಾರವಿಲ್ಲದೆ, ಆಘಾತದಿಂದ ಅಸ್ವಸ್ಥಗೊಂಡಿದ್ದವು. ಚಿಕಿತ್ಸೆ ನೀಡುತ್ತಿದ್ದರೂ, ಒಂದೊಂದಾಗಿ ಪ್ರಾಣ ಕಳೆದುಕೊಂಡಿತ್ತು.
ಇದನ್ನೂ ಓದಿ : ಉಡುಪಿ | ಚಾರಣ ಪ್ರಿಯರೇ ಇಲ್ನೋಡಿ.. ಇಂದಿನಿಂದ ಜ.12 ರವರೆಗೆ ಈ ಪ್ರದೇಶಗಳಿಗೆ ಪ್ರವೇಶ ನಿರ್ಬಂಧ!



















