ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ವಿದೇಶದಲ್ಲಿದ್ದ ಮಿಲಿಂದ್ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ.
ಅನಾರೋಗ್ಯದಿಂದ ಬಳಲುತ್ತಿದ್ದ ಮಿಲಿಂದ್ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ (ಜು.27) ಸಂಜೆ ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಮಿಲಿಂದ್ ಕ್ಯಾನರ್‌ನಿಂದ ಬಳಲುತ್ತಿದ್ದು, ಸಕ್ರಾ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆ ನೀಡಲಾಗುತ್ತಿದೆ.