ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ನಾಯಕರು ನನ್ನನ್ನು ತಳ್ಳಿದ್ದಾರೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಅಲ್ಲದೇ, ಈ ಕುರಿತು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ನಮ್ಮ ಸಂಸದರೊಂದಿಗೆ ನಾವು ಮಕರ ದ್ವಾರ ತಲುಪಿದಾಗ ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ. ಹೀಗಾಗಿ ನಾನು ಕೆಳಗೆ ಬಿದ್ದೆ. ಇದರಿಂದಾಗಿ ನನಗೆ ಗಾಯಗಳಾಗಿವೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಸಂಸದರು ತಳ್ಳಿದ್ದರಿಂದಾಗಿ ಮೊಣಕಾಲುಗಳಿಗೆ ಗಾಯವಾಗಿದೆ. ಆಗ ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ 11 ಗಂಟೆಗೆ ಸದನಕ್ಕೆ ಕುಂಟುತ್ತಾ ಬಂದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.