ಬೆಂಗಳೂರು : ಮನೆಯಲ್ಲೇ ಹ್ಯಾಂಡ್‌ಮೇಡ್ ಗನ್ ಹಾಗೂ ಬುಲೆಟ್‌ಗಳನ್ನು ತಯಾರಿಸಿ ಬೆಂಗಳೂರಿಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜೆನ್ಜಿರ್ ಅಲಿಯಾಸ್ ಸರ್ದಾರ್ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂರು ತಿಂಗಳ ಹಿಂದೆ ಪ್ರಕರಣವೊಂದರಲ್ಲಿ ಇಮ್ರಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಇಮ್ರಾನ್, ಬೆಂಗಳೂರಿಗೆ ಗನ್‌ಗಳನ್ನು ಪೂರೈಸುತ್ತಿದ್ದ ಜೆನ್ಜಿರ್ ಅಲಿಯಾಸ್ ಸರ್ದಾರ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ.
ಇಮ್ರಾನ್ ನೀಡಿದ ಹೇಳಿಕೆಯ ಆಧಾರದ ಮೇಲೆ ತನಿಖೆ ನಡೆಸಿದ ಸಿಸಿಬಿ ಪೊಲೀಸರು, ಮಧ್ಯಪ್ರದೇಶದ ಇಂದೋರ್‌ನಲ್ಲಿ ಜೆನ್ಜಿರ್ ಅಲಿಯಾಸ್ ಸರ್ದಾರ್‌ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಮನೆಯಲ್ಲೇ ಹ್ಯಾಂಡ್‌ಮೇಡ್ ಗನ್‌ಗಳು ಮತ್ತು ಬುಲೆಟ್‌ಗಳನ್ನು ತಯಾರಿಸುತ್ತಿದ್ದ. ಸದ್ಯ ಬಂಧಿತನಿಂದ ಗನ್ ತಯಾರಿಕೆಗೆ ಬಳಸುತ್ತಿದ್ದ ಕಚ್ಚಾ ವಸ್ತುಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ತಯಾರಿಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಬೆಂಗಳೂರಿಗೆ ಪೂರೈಸುತ್ತಿದ್ದ ಎನ್ನಲಾಗಿದ್ದು, ಈ ಜಾಲದ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!


















