ಕೋಲಾರ: ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ (Online Cricket Betting) ದಂಧೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೋಲಾರ (Kolar) ಜಿಲ್ಲೆಯ ಮುಳಬಾಗಿಲು (Mulabagilu) ನಗರದಲ್ಲಿ ಈ ಘಟನೆ ನಡೆದಿದೆ. ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಬಂಧಿತ ಆರೋಪಿಯನ್ನು ಪೊಲೀಸರು ಈಗ ವಿಚಾರಣೆಗೊಳಪಡಿಸಿದ್ದಾರೆ.
ಬಂಧಿತನು ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್ಲೈನ್ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್ಗಳ ಮೂಲಕ ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಬಂಧಿತನಿಂದ ಹಲವಾರು ವಸ್ತುಗಳು ಹಾಗೂ 32,046 ರೂ. ವಶಪಡಿಸಿಕೊಳ್ಳಲಾಗಿದೆ.