ನಟ ಸೈಫ್ ಅಲಿ ಖಾನ್ (Saif Ali Khan) ಚಾಕು ಇರಿದಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬಯಿ ಪೊಲೀಸರು ಗುರುವಾರ ತಡರಾತ್ರಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದಿದ್ದ ದಾಳಿಕೋರನನ್ನು ನಿನ್ನೆ (ಜ.16) ತಡರಾತ್ರಿ ಮುಂಬಯಿ ಪೊಲೀಸರು ಬಂಧಿಸಿ, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ದಾಳಿಕೋರನನ್ನು ಬಂಧಿಸಲು ಮುಂಬಯಿ ಪೊಲೀಸರು 20 ತಂಡಗಳ ರಚನೆ ಮಾಡಿದ್ದರು. ಕೊನೆಗೂ ದಾಳಿಕೋರ ಪೋಲೀಸರ ಅತಿಥಿಯಾಗಿದ್ದಾನೆ. ಇದು ದರೋಡೆ ಮಾಡಲು ಈ ಕೃತ್ಯ ಎಸಗಿದ್ದ ಅಥವಾ ಕೊಲೆ ಮಾಡುವ ಹಿನ್ನಾರ ಇತ್ತಾ? ಎಂಬುದನ್ನು ತಿಳಿಯಲು ವಿವಿಧ ರೀತಿಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿ ಈ ಹಿಂದೆ ಶಾರುಖ್ ಖಾನ್ ಮನೆ ಮುಂದೆ ಕೂಡ ಕಾಣಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಶಂಕಿತ ಆರೋಪಿಯ ಫೋಟೋ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ನಿನ್ನೆಯಷ್ಟೇ ಪೊಲೀಸರು ಬಹಿರಂಗಪಡಿಸಿದ್ದರು. ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಶಂಕಿತ, ಬ್ಯಾಗ್ ವೊಂದನ್ನು ಹಾಕಿಕೊಂಡಿದ್ದು, ಕಿತ್ತಳೆ ಬಣ್ಣದ ಸ್ಕಾಫ್ ಧರಿಸಿದ್ದ. ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವಾಗ ಸಿಟಿಟಿವಿ ಕ್ಯಾಮೆರಾ ನೋಡಿದ್ದು, ವಿಡಿಯೋದಲ್ಲಿ ಸೆರೆಯಾಗಿತ್ತು.