ಬೆಂಗಳೂರು : ಕೆಂಗೇರಿ ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೈಲು ಹಳಿಗೆ ಸಿಲುಕಿದ ಪರಿಣಾಮ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಕೆಂಗೇರಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವ್ಯಕ್ತಿಯ ಗುರುತು ಹಾಗೂ ಹಿನ್ನೆಲೆ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಕಾಫಿ ಬಿಲ್ ಕೇಳಿದ್ದಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಕಾನ್ಸ್ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್!


















