ಹುಬ್ಬಳ್ಳಿ : ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಸ್ವಾಮೀಜಿ ವೇಷ ಧರಿಸಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
ಸ್ವಾಮೀಜಿ ವೇಷದಲ್ಲಿ ಎಣ್ಣೆ ಹೊಡೆದು ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಬುದ್ದಿ ಕಲಿಸಿದ್ದಾರೆ. ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಕೊರಳಲ್ಲಿ ರುದ್ರಾಕ್ಷಿ ಮಾಲೆ ಹಾಕಿ ಮನೆ ಮನೆಗೆ ಭಿಕ್ಷೆ ಬೇಡುತ್ತಾ ಬಂದಿದ್ದ ಈತ, ಮದ್ಯದ ಗುಂಗಲ್ಲಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತನೆ ಮಾಡಿರುವ ಆರೋಪ ಕೇಳಿಬಂದಿದೆ.
ಇದನ್ನು ಕಂಡ ಸಾರ್ವಜನಿಕರು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಇದನ್ನೂ ಓದಿ : ತುಮಕೂರು | ಸಹಾಯ ಧನ ಮಂಜೂರು ಮಾಡಲು 1.25 ಲಕ್ಷ ಲಂಚಕ್ಕೆ ಬೇಡಿಕೆ.. ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!



















