ಹಾವೇರಿ : ಜಿಲ್ಲೆಯ ಬಸ್ ನಿಲ್ದಾಣ ಸಮೀಪದ ಐಶ್ವರ್ಯ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಂಜುನಾಥ ಕೊರಡೂರು (65) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಧಾರವಾಡ ಜಿಲ್ಲೆಯ ಕಮಲಾಪುರ ಗ್ರಾಮದ ನಿವಾಸಿಯಾಗಿದ್ದಾರೆ.
ಮೊನ್ನೆ ರಾತ್ರಿ ಹಾವೇರಿಗೆ ಬಂದಿದ್ದ ಮಂಜುನಾಥ, ವಿವಿಧ ದೇವಸ್ಥಾನಗಳು ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಬಳಿಕ ನಿನ್ನೆ ರಾತ್ರಿ ಊಟ ಮಾಡಿ ಲಾಡ್ಜ್‌ನಲ್ಲಿ ಮಲಗಿದ್ದರು ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ಅವರು ಲಾಡ್ಜ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಹಾವೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಲಕ್ನೋ ತಂಡಕ್ಕೆ ಬಿಗ್ ಶಾಕ್.. ಹಸರಂಗ ಗಾಯದ ಕುರಿತು ಫ್ರಾಂಚೈಸಿ ಹೇಳಿದ್ದೇನು?



















