ಬೆಂಗಳೂರು : ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಪ್ರಸಂಜಿತ್ ದಾಸ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಪ್ರಸಂಜಿತ್ ದಾಸ್ ಗಾರೆ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.
ಪ್ರಸಂಜಿತ್ ದಾಸ್ ತಮ್ಮ ಸ್ನೇಹಿತನೊಂದಿಗೆ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋ ನಿಲ್ಲಿಸಲು ಹೇಳಿ ಫ್ಲೈ ಓವರ್ ಮೇಲಿಂದ ಹಾರಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಬಗ್ಗೆ ನಿಖರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾಸಲಾಗಿದೆ.
ಇದನ್ನೂ ಓದಿ : ಅಮೆರಿಕನ್ನರಿಗೆ 2 ಸಾವಿರ ಡಾಲರ್ ಟ್ಯಾರಿಫ್ ಡಿವಿಡೆಂಡ್ | ಟ್ರಂಪ್ ಘೋಷಣೆ



















