ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿ ದೊಡ್ಡಕಲಸಂದ್ರ ನಮ್ಮ ಮೆಟ್ರೋ ನಿಲ್ದಾಣದ ಬಳಿ ಶನಿವಾರ ಸಂಜೆ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದೊಡ್ಡಕಲಸಂದ್ರ ಮೆಟ್ರೊ ನಿಲ್ದಾಣದ ಹತ್ತಿರ ಸಂಜೆ 5:47ರ ಹೊತ್ತಿಗೆ ಘಟನೆ ನಡೆದಿದೆ. 35 ವರ್ಷಕ್ಕೂ ಹೆಚ್ಚು ವಯಸ್ಸಿರುವ ವ್ಯಕ್ತಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.. ವ್ಯಕ್ತಿ ಆತ್ಮಹತ್ಯೆ ಬಗ್ಗೆ BMRCL ಮೂಲ ಮಾಹಿತಿ ನೀಡಿದೆ. ಹಸಿರು ಮಾರ್ಗದಲ್ಲಿ ಮೆಟ್ರೋ ವ್ಯತ್ಯಯವಾಗಿದೆ. ಸಿಲ್ಕ್ ಇನ್‌ಸ್ಟಿಟ್ಯೂಟ್ ಟು ಯಲಚೇನಹಳ್ಳಿ ನಡುವೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆನಂತರ ಈ ಸೇವೆ ಆರಂಭವಾಯಿತು. ಇತ್ತೀಚೆಗಷ್ಟೇ ಯುವಕನೊಬ್ಬ ಮೆಟ್ರೋ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಆ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.