ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಅಮೃತಾಪುರ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೈಲು ವ್ಯಕ್ತಿ ಮೇಲೆ ಚಲಿಸಿರುವುದರಿಂದ ದೇಹದಿಂದ ರುಂಡ ಸಂಪೂರ್ಣ ಬೇರ್ಪಟ್ಟಿದೆ. ಮೃತ ವ್ಯಕ್ತಿಯನ್ನು ಹೈದರಾಬಾದ್ ಮೂಲದ ರಾಜು (46) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಹೈದರಾಬಾದ್ ನಲ್ಲಿ ಆಟೋ ಚಾಲಕನಾಗಿ ದುಡಿಯುತ್ತಿದ್ದ ಎಂದು ತಿಳಿದು ಬಂದಿದೆ. ಹೈದರಾಬಾದ್ ನಿಂದ ಹೊಳಲ್ಕೆರೆಗೆ ಕೆಲಸ ನಿಮಿತ್ತ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ಚಿತ್ರದುರ್ಗ ಜಿಲ್ಲೆಯ ಹೊಳೆಲ್ಕೆರೆ ತಾಲೂಕಿನ ಅಮೃತಾಪುರ ಎಂಬಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.