ಬೆಂಗಳೂರು : ತಮ್ಮನನ್ನು ಕಳೆದುಕೊಂಡ ನೋವಿನಿಂದ ಮಾನಸಿಕವಾಗಿ ನೊಂದಿದ್ದ ಅಣ್ಣನೊಬ್ಬ ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆನಂದ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಇತ್ತೀಚೆಗೆ ತಮ್ಮನನ್ನು ಕಳೆದುಕೊಂಡಿದ್ದ ಆನಂದ್, ಸಹೋದರನ ಸಾವಿನಿಂದ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಮ್ಮನ ನೆನಪಿನಲ್ಲಿ ಆನಂದ್ ಮದ್ಯಕ್ಕೆ ದಾಸನಾಗಿ ನಿನ್ನೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.
ವಿಷಯ ತಿಳಿದ ಮನೆಯವರು ತಕ್ಷಣ ಆನಂದ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆನಂದ್ ಸಾವನ್ನಪ್ಪಿದ್ದಾನೆ.
ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ ಆನಂದ್ ಕುಮಾರ್ ಮೃತದೇಹವನ್ನು ಸದ್ಯ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸಂಬಂಧ ಕಾಟನ್‌ಪೇಟೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಶಿಥಿಲ ಟ್ಯಾಂಕ್‌ನಿಂದ ಮಕ್ಕಳ ಜೀವಕ್ಕೆ ಕಂಟಕ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!



















