ಬಾಗಲಕೋಟೆ : ಅಕ್ರಮ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಭೂಮಿ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿನಗುಂಡಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹನಮಂತ 30 ಮೃತ ದುರ್ದೈವಿ. ಅರಣ್ಯ ಇಲಾಖೆಗೆ ಸಂಬಂಧಿಸಿದ ಗುಡ್ಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಕಲ್ಲು ತುಂಬುವ ವೇಳೆ ಭೂಮಿ ಕುಸಿದಿದೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಮಖಂಡಿ ಸಿಪಿಐ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.
ಇದನ್ನೂ ಓದಿ : ಮಂಗಳೂರು | ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ನಲ್ಲಿ ಪೋಸ್ಟ್.. ಇಬ್ಬರ ಬಂಧನ!



















