ಕಲಬುರಗಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೆಪೇಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೈಯದ್ ಸಲೀಂ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಲೀಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸೈಯದ್ ಸಲೀಂ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಖಾಸಗಿ ಮತ್ತು ಬ್ಯಾಂಕ್ ನಲ್ಲಿ 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ.
ಆದರೆ, ಸಾಲ ಮರಳಿ ಕಟ್ಟುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಾರೆಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಾಲಗಾರರ ಕಿರುಕುಳದ ವಿರುದ್ಧ ಸಲೀಂ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಸುಲೆಪೇಟ್ ಪಟ್ಟಣದ ಸರ್ಕಲ್ ನಲ್ಲಿ ಸಲೀಂ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















