ಬೆಂಗಳೂರು: ಬಿಬಿಎಂಪಿ (BBMP) ಕಸದ ಲಾರಿಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದು, ರೊಚ್ಚಿಗೆದ್ದ ಜನರು ಲಾರಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಬೆಂಗಳೂರಿನ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ಈ ಘಟನೆ ನಡೆದಿದೆ. ಬೈಕ್ ಸವಾರನಿಗೆ ಕಸದ ಲಾರಿ (BBMP Garbage Truck) ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಲ್ಲಿದ್ದ ಸ್ಥಳೀಯರು ರೊಚ್ಚಿಗೆದ್ದು ಕಸದ ಲಾರಿಗೆ ಬೆಂಕಿ ಹಚ್ಚಿದ್ದಾರೆ.
ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಇಬ್ಬರು ಮಹಿಳೆಯರು ಲಾರಿಗೆ ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ.