ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿಯಲ್ಲಿ ಕಾಡಾನೆ ದಾಳಿಗೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ಸೌತಡ್ಕ ನಿವಾಸಿ ಬಾಲಕೃಷ್ಣ ಮೃತರು. ಗುರುವಾರ ಕಾಡಾನೆಗಳ ಹಿಂಡು ಬಂದಿದ್ದು, ಸ್ಥಳೀಯರು ಓಡಿಸುವ ವೇಳೆ ಆನೆ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.



















