ಬೆಳಗಾವಿ: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ ಆರೋಪಿ ಕಾಮುಕನಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.
ಬೆಳಗಾವಿಯ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಕಾಮುಕನಿಗೆ ಗಲ್ಲು ಶಿಕ್ಷೆ ಪ್ರಕಟಿಸಿದೆ. ಕಾಮುಕ ಉದ್ದಪ್ಪ ಗಾಣಿಗೇರ(32) ಎಂಬ ಕಾಮುಕನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಉದ್ದಪ್ಪ ಗಾಣಿಗೇರ(32) ಎಂಬ ಕಾಮುಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ.
ಮನೆಯ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಕಬ್ಬಿನ ಗದ್ದೆಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ, ಮಗುವಿನ ಕಣ್ಣು, ಮೂಗಿನಲ್ಲಿ ಮಣ್ಣು ಹಾಕಿ ಅಮಾನುಷವಾಗಿ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಅಲ್ಲದೇ, ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ರೂ. ಪರಿಹಾರ ವಿತರಿಸುವಂತೆ ಕೋರ್ಟ್ ಸೂಚಿಸಿದೆ.