ಬೆಳಗಾವಿ: ಸಾಲವಾಗಿ ಕೊಟ್ಟ ಹಣ ಮರುಪಾವತಿಸದ ಸ್ನೇಹಿತನನ್ನು ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿರವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ.
ಗಿರಿಯಾಲ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದ ದುರ್ದೈವಿ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಹಣ ಸಾಲವನ್ನಾಗಿ ಪಡೆದಿದ್ದ. ಒಂದು ವಾರದೊಳಗೆ ಹಣ ಮರಳಿಸುವುದಾಗಿ ಹೇಳಿದ್ದ. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಾಲ ಕೇಳಲು ದಯಾನಂದ ಮುಂದಾಗಿದ್ದ. ಇದೇ ಹಣದ ವಿಚಾರಕ್ಕೆ ಮಂಜುನಾಥ ಹಾಗೂ ದಯಾನಂದ ಮಧ್ಯೆ ಜಗಳವಾಗಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥನನ್ನು ದಯಾನಂದ ಕೊಲೆ ಮಾಡಿದ್ದಾನೆ.
ರಾತ್ರಿ ನಡೆದ ಜಗಳದ ಸಿಟ್ಟಿನಲ್ಲೇ ಬೆಳಗಿನ ಜಾವ ಕೊಡ್ಲಿಯಿಂದ ಹೊಡೆದು ಮಂಜುನಾಥನ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮಂಜುನಾಥ ಉಸಿರು ಚಲ್ಲಿದ್ದಾನೆ. ಮಂಜುನಾಥ ಸಾವನಪ್ಪಿರುವ ಸುದ್ದಿ ತಿಳಿದು ಪೊಲೀಸರಿಗೆ ಸ್ವಯಂ ಪ್ರೇರಿತವಾಗಿ ಹೋಗಿ ದಯಾನಂದ ಶರಣಾಗಿದ್ದಾನೆ.
ಇದನ್ನೂ ಓದಿ: SSLC ಟಾಪರ್ಸ್ ಗಳಿಗೆ ದೆಹಲಿ ಪ್ರವಾಸ ಆಯೋಜಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ



















