ಉತ್ತರ ಕನ್ನಡ : ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಕಾರವಾರ ಭಾಗದ ಹೊನ್ನಾವರ ತಾಲೂಕಿನ ಕರ್ಕಿಕೋಡಿ ಬಳಿ ಶರಾವತಿ ನದಿಯಲ್ಲಿ ಸಂಭವಿಸಿದೆ.
ಮೃತರನ್ನು ಗಣಪತಿ ಬಾಲಕೃಷ್ಣ ಜಾಧವ್ (50) ಎಂದು ಗುರುತಿಸಲಾಗಿದೆ. ಇವರು ಬಾಂದೆಹಳ್ಳ ನಿವಾಸಿಯಾಗಿದ್ದರು. ಮೀನು ಹಿಡಿಯುವ ವೇಳೆ ಅಕಸ್ಮಿಕವಾಗಿ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಘಟನೆಯಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!



















