ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಹಳಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಘಟನೆ ನಡೆದಿದೆ. ಪಕ್ಕದ ಮನೆಯವನ ಬೆದರಿಕೆ ಮತ್ತು ಕಿರುಕುಳದ ಕಾರಣ, ಪ್ರಿಯಾಂಕ (19) ಮತ್ತು ಶಕುಂತಲಾದೇವಿ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಗಳು ಪ್ರಿಯಾಂಕಾಳ ಕುಟುಂಬವು ಮದುವೆ ಸಿದ್ಧತೆ ನಡೆಸುತ್ತಿದ್ದ ಸಮಯದಲ್ಲಿ ಈ ದುಃಖದ ಘಟನೆ ಸಂಭವಿಸಿದ್ದು, ಕುಟುಂಬಸ್ಥರಲ್ಲಿ ಆತಂಕ ಮತ್ತು ಗಂಭೀರ ಆಘಾತ ಉಂಟಾಗಿದೆ.
ಸ್ಥಳಕ್ಕೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಘಟನೆ ಕುರಿತು ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಡೆಡ್ಲಿ ಆಕ್ಸಿಡೆಂಟ್ | ಓರ್ವ ಮಹಿಳೆ ಸ್ಥಳದಲ್ಲೇ ಸಾವು



















