ಮಂಡ್ಯ: ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ.
ಮೈಸೂರಿನ ಸದ್ದಾಂ ಹುಸೇನ್ (32) ಹಾಗೂ ಸೈಯದ್ (32) ಬಂಧಿತ ಆರೋಪಿಗಳು. ಇಬ್ಬರು ಬರೋಬ್ಬರಿ 38 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರ ಕಾರ್ಯಚರಣೆ ವೇಳೆ ಬೆಳಕಿಗೆ ಬಂದಿದೆ.

ಬೈಕ್‌ನಲ್ಲಿ ಬಂದು ಸರಗಳ್ಳತನ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇವರು, ಕಿರುಗಾವಲಿನ ಚಿಕ್ಕೇಗೌಡನದೊಡ್ಡಿ ಗ್ರಾಮದ ಸರಿತಾ ಎಂಬ ಮಹಿಳೆ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದರು. ಈ ಪ್ರಕರಣ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪತ್ತೆಗೆ ಎಎಸ್ಪಿ ತಿಮ್ಮಯ್ಯ, ಯಶವಂತ್ ಕುಮಾರ, ಹಲಗೂರು ವೃತ್ತ ನಿರೀಕ್ಷಕ ಶ್ರೀಧರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಈ ವಿಶೇಷ ಕಾರ್ಯಾಚರಣೆ ಮೂಲಕ ಪೊಲೀಸರು ಇಬ್ಬರು ಆರೋಪಿಗಳನ್ನು ಸೆದೆಬಡಿದಿದ್ದಾರೆ.
ಶೋಕಿಗಾಗಿ ಸರಗಳ್ಳತನ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಸೈಯದ್ ಎಂಬ ಆರೋಪಿ ಸುಮಾರು 38 ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಸದ್ಯ ಬಂಧಿತ ಆರೋಪಿಗಳಿಂದ ಸುಮಾರು 31 ಲಕ್ಷ ಮೌಲ್ಯದ 253 ಗ್ರಾಂ ಚಿನ್ನಾಭರಣ, 178 ಗ್ರಾಂ ಬೆಳ್ಳಿ ಹಾಗೂ ಎರಡೂ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್, ಪಿಎಸ್ಐ ರವಿಕುಮಾರ್, ಸಿಬ್ಬಂದಿಗಳಾದ ಪ್ರಭುಸ್ವಾಮಿ, ಸಿದ್ದರಾಜು, ಶ್ರೀನಿವಾಸ್, ಲೋಕೇಶ್ ಸೇರಿ ಹಲವರು ಭಾಗಿದ್ದರು. ಪೊಲೀಸರ ಕಾರ್ಯಕ್ಕೆ ಎಸ್ಪಿ ಶೋಭಾರಾಣಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಾನ್ ಕನ್ನಡಿಗ HR ಕೆಲಸಕ್ಕೆ ಬೇಕು | ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಸಿಡಿದೆದ್ದ ಕನ್ನಡಿಗರು



















